ಕೂಡಿಗೆ. ಜು. 24: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಪತ್ತು ನಿರ್ವಹಣೆ ಯೋಜನೆ ಸಮಿತಿ ಮತ್ತು ಗ್ರಾಮ ಮಟ್ಟದ ಕಾರ್ಯಪಡೆಯ ಮುಂಜಾಗ್ರತಾ ಕ್ರಮದ ಸಭೆಯು ಗ್ರಾಮ ಪಂಚಾಯಿತಿ ನೋಡಲ್ ಅಧಿಕಾರಿಯಾದ ಹಾರಂಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ವರದರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಕಳೆದ ವರ್ಷ ಅನೇಕ ಮನೆಗಳು ಜಲಾವೃತಗೊಂಡಿz್ದÀವು, ಅಂತಹ ಸ್ಥಳದಲ್ಲಿ ವಾಸಿಸುತ್ತಿರುವ ಕುಟುಂಬದವರಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆಗಳು ನಡೆದವು.
ವರದರಾಜ್ ಮಾತನಾಡಿ, ವಿಪತ್ತು ನಿರ್ವಹಣೆ ಸಮಿತಿಯವರು ತಮ್ಮ ವ್ಯಾಪ್ತಿಯಲ್ಲಿ ಶುಚಿತ್ವಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳಿಗೆ ಹೆಚ್ಚು ಗಮನಹರಿಸಬೇಕು. ತಮ್ಮ ಜವಾಬ್ದಾರಿಯನ್ನು ಸೂಚನೆಯಂತೆ ನಿರ್ವಹಿಸಬೇಕೆಂದು ಮನವಿ ಮಾಡಿದರು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪ್ರೇಮಲೀಲಾ, ಉಪಾಧ್ಯಕ್ಷ ಕೆ.ಟಿ. ಗಿರೀಶ್ ಸೇರಿದಂತೆ ಮಾಜಿ ಸದಸ್ಯರುಗಳು, ಕೂಡಿಗೆ ವಿಭಾಗದ ಕಂದಾಯ ಇಲಾಖೆ ಲೆಕ್ಕಾಧಿಕಾರಿ ಗುರುದರ್ಶನ್, ಅಭಿವೃದ್ಧಿ ಅಧಿಕಾರಿ ಶಿಲ್ಪಾ ಹಾಜರಿದ್ದರು.
ಕುಶಾಲನಗರ ಪೆÇಲೀಸ್ ಇಲಾಖೆ ಸಿಬ್ಬಂದಿ, ಕಂದಾಯ ಇಲಾಖೆ, ಆರೋಗ್ಯ ಇಲಾಖೆಯವರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು. ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ವಿವಿಧ ಇಲಾಖೆಯ ಅಧಿಕಾರಿಗಳು, ಆರೋಗ್ಯ ಇಲಾಖೆಯ ಶುಶ್ರೂಷಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ನೀರು ಗಂಟಿಗಳು ಸೇರಿದಂತೆ ವಿವಿಧ ಅಧಿಕಾರಿ ವರ್ಗದವರು ಪಾಲ್ಗೊಂಡಿದ್ದರು.