ಕೂಡಿಗೆ, ಜು. 24: ತೊರೆನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಗಳು ಪತ್ತೆಯಾದ ಹಿನ್ನೆಲೆಯಲ್ಲಿ ಆಯಾ ಗ್ರಾಮಗಳ ಬೀದಿಗಳಿಗೆ ಔಷಧಿ ಸಿಂಪಡಿಸುವ ಕಾರ್ಯ ನಡೆಯುತ್ತಿದೆ.

ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಶುಚಿತ್ವ ಕಾಪಾಡುವ ಸಲುವಾಗಿ ವಿವಿಧ ಕ್ರಿಮಿನಾಶಕ ಔಷಧಿ ಮತ್ತು ಡಿಟಿಡಿ ಪೌಡರ್, ಬ್ಲೀಚಿಂಗ್ ಪೌಡರ್ ಹಾಕುವುದು, ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯುವ ವ್ಯವಸ್ಥೆ ಕಲ್ಪಿಸಿದೆ ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂತೋಷ ತಿಳಿಸಿದ್ದಾರೆ.