ಮಡಿಕೇರಿ, ಜು. 25: ನಗರದ ಪುರಾತನ ರಾಜರ ಕೋಟೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಯನ್ನು ಶುಕ್ರವಾರ ಶಾಸಕ ರಂಜನ್ ವೀಕ್ಷಿಸಿದರು.

ಕೋಟೆಯ ಹಳೆಯ ಸ್ವರೂಪ ವನ್ನು ಉಳಿಸುವ ನಿಟ್ಟಿನಲ್ಲಿ ಕಾಮಗಾರಿ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಕಾಮಗಾರಿ ಪ್ರಗತಿಯಾಗಬೇಕು. ನಗರದ ಕೋಟೆ ಯನ್ನು ಈ ಹಿಂದೆ ಇದ್ದ ರೀತಿಯಲ್ಲಿ ಯೇ ಅಭಿವೃದ್ಧಿಪಡಿಸಿ ಕಾಮಗಾರಿ ಪೂರ್ಣಗೊಳಿ ಸುವಂತಾಗಬೇಕು ಎಂದು ಅಪ್ಪಚ್ಚು ರಂಜನ್ ಹೇಳಿದರು.

ಕೋಟೆ ಕಾಮಗಾರಿಯ ಸಂಬಂಧ ನ್ಯಾಯಾಲಯದ ಆದೇಶದ ಮೇರೆಗೆ ಈಗಾಗಲೇ ಸರ್ಕಾರದಿಂದ ರೂ. 8 ಕೋಟಿ ಬಿಡುಗಡೆಯಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭ ವಸಂತ್, ರಾಘವೇಂದ್ರ ಇತರರು ಇದ್ದರು.