ಕೂಡಿಗೆ, ಜು. 25: ಕೂಡಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸರಕಾರ ನೀಡುವ ಪಠ್ಯಪುಸ್ತಕಗಳನ್ನು ವಿತರಣೆ ಮಾಡಲಾಯಿತು. 1 ರಿಂದ 7ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಸರಕಾರ ನೀಡುವ ಪುಸ್ತಕಗಳ ಆಧಾರದಲ್ಲಿ ಕಲಿಕೆಯ ಮಟ್ಟವನ್ನು ಹೆಚ್ಚಿಸಲು ತಮ್ಮ ತಮ್ಮ ಮನೆಯಲ್ಲಿ ಅಭ್ಯಾಸಿಸುವ ಯೋಜನೆ ಇದಾಗಿದೆ.
ಲಾಕ್ಡೌನ್ ಹಿನ್ನೆಲೆ ವಿದ್ಯಾರ್ಥಿಗಳಿಗೆ ಪುಸ್ತಕದ ಮೂಲಕ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಲು ಸಹಾಯವಾಗುತ್ತದೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಸಣ್ಣಕ್ಕ ತಿಳಿಸಿದ್ದಾರೆ.
ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಸಹ ಶಿಕ್ಷಕರುಗಳಾದ ವಿಜಯಲಕ್ಷ್ಮಿ, ಕಮಲ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.