ಸೋಮವಾರಪೇಟೆ, ಜು. 25: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಒಂದರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸುವ ಕಾರ್ಯಕ್ಕೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಚಾಲನೆ ನೀಡಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ಸಾಂಕೇತಿಕವಾಗಿ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು.

ಈ ಸಂದರ್ಭ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡು ಅವರು, ತಾಲೂಕಿನ ಎಲ್ಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಲು ಕ್ರಮ ಕೈಗೊಳ್ಳಲಾಗಿದ್ದು, ಶಾಲಾ ಶಿಕ್ಷಕರೇ ಪ್ರತಿ ವಿದ್ಯಾರ್ಥಿಯ ಮನೆಗಳಿಗೆ ತೆರಳಿ ಪುಸ್ತಕ ನೀಡಲಿದ್ದಾರೆ. ಈಗಾಗಲೇ ಇಲಾಖೆಯಿಂದ ಶೇ. 80 ರಷ್ಟು ಪುಸ್ತಕಗಳು ಸರಬರಾಜಾಗಿವೆ ಎಂದರು.