ಮಡಿಕೇರಿ, ಜು. 26: ಕರ್ನಾಟಕ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರಕಾರವು, ಒಂದು ವರ್ಷದ ಅಧಿಕಾರವನ್ನು ಪೂರೈಸುವು ದರೊಂದಿಗೆ, ತಾ.27ರಂದು (ಇಂದು) ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಸರಕಾರದ ಸಾಧನೆಗಳ ಕೈಪಿಡಿ ಬಿಡುಗಡೆಯಾಗಲಿದೆ. ರಾಜ್ಯ ವಸತಿ ಖಾತೆ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಹೊಂದಿರುವ ವಿ. ಸೋಮಣ್ಣ ಅವರು ಇಲ್ಲಿನ ಜಿ.ಪಂ. ಸಭಾಂಗಣದಲ್ಲಿ ಸಾಧನಾ ಕೈಪಿಡಿ ಬಿಡುಗಡೆ ಮಾಡಲಿದ್ದಾರೆ.
ಬೆಳಿಗ್ಗೆ 10.30 ಗಂಟೆಗೆ ಬೆಂಗಳೂರಿನಿಂದ ಮಡಿಕೇರಿಗೆ ಆಗಮಿಸಲಿರುವ ಸಚಿವರು, 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿರುವ ಸರಕಾರದ ಒಂದು ವರ್ಷದ ಸಾಧನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕೊಡಗಿನ ಶಾಸಕರು, ಸಂಸದರು, ಮೇಲ್ಮನೆ ಸದಸ್ಯರು, ಜಿ.ಪಂ. ಪ್ರತಿನಿಧಿಗಳ ಸಹಿತ ಜಿಲ್ಲಾಧಿಕಾರಿ ಹಾಗೂ ಇತರ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಆ ಬಳಿಕ ಜಿಲ್ಲೆಯಲ್ಲಿ ಕೊರೊನಾ ಸೋಂಕು ತಡೆಗಟ್ಟುವ ದಿಸೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು ಹಾಗೂ ಇತರ ವಿಷಯಗಳ ಕುರಿತು ಸಚಿವರು ಪರಿಶೀಲನಾ ಸÀಭೆ ನಡೆಸಲಿದ್ದಾರೆ. ಅನಂತರ ಮಡಿಕೇರಿಯಿಂದ ಸೋಮವಾರಪೇಟೆ ತಾಲೂಕಿನ ಅಂಕನಹಳ್ಳಿ ಪಶುಚಿಕಿತ್ಸಾ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಸಚಿವರು, ರಾಜಧಾನಿ ಬೆಂಗಳೂರಿಗೆ ಮರಳ ಲಿದ್ದಾರೆ. ರಾಜ್ಯದೆಲ್ಲೆಡೆ ತಾ. 27ರಂದು ಕರ್ನಾಟಕ ಸರ್ಕಾರದ ಒಂದು ವರ್ಷದ ಸಾಧನಾ ಕಾರ್ಯಕ್ರಮ ಹಿನ್ನೆಲೆ; ತಾ.28ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸದಲ್ಲಿ ಬದಲಾವಣೆಯೊಂದಿಗೆ ದಿನ ಮುಂಚಿತವಾಗಿ ಆಗಮಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಖಚಿತಪಡಿಸಿದ್ದಾರೆ.