ಮಡಿಕೇರಿ, ಜು.27 : ರಾಜ್ಯಾದ್ಯಂತ ಆ.1 ರಂದು ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ರಾಜ್ಯದ ಹಿಲಾಲ್ ಸಮಿತಿ ಘೋಷಿಸಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಜು.31 ರಂದು ಹಬ್ಬ ನಡೆಯಲಿದೆ ಎಂದು ಸಮಿತಿ ತಿಳಿಸಿದೆ. ಎರಡೂ ದಿನಗಳಂದು ಈದ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವು ದನ್ನು ನಿರ್ಬಂಧಿಸಿ ಸರ್ಕಾರ ಆದೇಶಿಸಿದ್ದು, ಮುಸಲ್ಮಾನ ಬಾಂಧವರು ಮಾರ್ಗಸೂಚಿಯನ್ನು ಪಾಲಿಸಿ ಸಹಕರಿಸಬೇಕೆಂದು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕೆ.ಎ.ಯಾಕುಬ್ ಮನವಿ ಮಾಡಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬಕ್ರಿದ್ ಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸುವುದರೊಂದಿಗೆ ಕೊರೊನಾ ಸೋಂಕಿನಿಂದ ವಿಶ್ವ ಮುಕ್ತವಾಗಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಕೋರಿದ್ದಾರೆ.