ಕುಶಾಲನಗರ, ಜು. 27: ಕುಶಾಲನಗರ-ಮಡಿಕೇರಿ ಹೆದ್ದಾರಿಯ ಗುಡ್ಡೆಹೊಸೂರಿನಲ್ಲಿ ರಸ್ತೆ ಬದಿಯಲ್ಲಿರುವ ಮಾಂಸದ ಅಂಗಡಿಗಳಲ್ಲಿ ಶುಚಿತ್ವದ ಕೊರತೆ ಜತೆಗೆ ಹೆದ್ದಾರಿಯ ಎರಡೂ ಬದಿಗಳಲ್ಲಿ ವಾಹನ ನಿಲುಗಡೆ ಮೂಲಕ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿದ್ದು, ಆಗಾಗ್ಗೆ ಅವಘಡಗಳು ಸಂಭವಿಸುತ್ತಿವೆ. ಈ ಬಗ್ಗೆ ‘ಶಕ್ತಿ’ಯಲ್ಲಿ ವರದಿ ಪ್ರಕಟಗೊಂಡ ಬೆನ್ನಲ್ಲೆ ಈ ನಿಟ್ಟಿನಲ್ಲಿ ಎಚ್ಚರ ವಹಿಸುವಂತೆ ವ್ಯಾಪಾರಿಗಳಿಗೆ ಪಂಚಾಯತಿ ಮೂಲಕ ನೋಟೀಸ್ ನೀಡಲಾಗಿದೆ ಎಂದು ಗುಡ್ಡೆಹೊಸೂರು ಪಿಡಿಓ ಶ್ಯಾಮ್ ‘ಶಕ್ತಿ’ಗೆ ತಿಳಿಸಿದ್ದಾರೆ.