ಮಡಿಕೇರಿ, ಜು.27: ಜಿಲ್ಲೆಯಲ್ಲಿ ತಾ.27 ರಂದು ಹೊಸ 6 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ ಜಿಲ್ಲೆಯಲ್ಲಿ 354 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 266 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಒಟ್ಟು 6 ಮಂದಿ ಸಾವನ್ನಪ್ಪಿದ್ದು, 82 ಪ್ರಕರಣಗಳು ಸಕ್ರಿಯವಾಗಿವೆ. ಹೊಸ ಪ್ರಕರಣಗಳ ವಿವರ ಸೋಮವಾರಪೇಟೆ ತಾಲೂಕಿನ ಅಬ್ಬೂರು ಕಟ್ಟೆಯ ಈ ಹಿಂದೆ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 20 ವರ್ಷದ ಪುರುಷನಲ್ಲಿ ಸೋಂಕು ಪತ್ತೆಯಾಗಿದೆ. ವೀರಾಜಪೇಟೆಯ ಆರೋಗ್ಯ ವಸತಿಗೃಹದಲ್ಲಿ ಈ ಹಿಂದೆ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 41 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆಯ ಬ್ಯಾಡಗೊಟ್ಟ ಮದಲಾಪುರ ಪೋಸ್ಟ್‍ನ 31 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆಯ ಬೀಟಿಕಟ್ಟೆ ಗೌಡಳ್ಳಿಯ 38 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಸೋಮವಾಪೇಟೆಯ ಶನಿವಾರಸಂತೆ ಕಾವೇರಿ ಕಾಲೇಜು ರಸ್ತೆಯ ಈ ಹಿಂದೆ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 12 ವರ್ಷದ ಬಾಲಕಿಗೆ ಸೋಂಕು ದೃಢಪಟ್ಟಿದೆ. ಕುಶಾಲನಗರದ ಹುಲುಸೆಯ ಸೋಂಕಿತವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 75 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ.