ವೀರಾಜಪೇಟೆ: ಕೊಡಗು ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘದ ವತಿಯಿಂದ ಇಂದು ಕಾರ್ಗಿಲ್ ವಿಜಯೋತ್ಸವ ಹಾಗೂ ಚೀನಾಗಡಿಯಲ್ಲಿ ಹೋರಾಡಿ ವೀರ ಮರಣವನ್ನಪ್ಪಿದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಮಿನಿ ವಿಧಾನ ಸೌಧದ ಮುಂದಿರುವ ಯೋಧರ ಸ್ತಂಭದ ಮುಂದೆ ಬೆಳಿಗ್ಗೆ ತಾಲೂಕು ತಹಶೀಲ್ದಾರ್ ಎಲ್.ಎಂ. ನಂದೀಶ್ ಅವರು ಪುಷ್ಪಗುಚ್ಚವಿರಿಸಿ ನಮನ ಸಲ್ಲಿಸಿ ಕಾರ್ಗಿಲ್‍ನಲ್ಲಿ ಮಡಿದ ಯೋಧರನ್ನು ಸ್ಮರಿಸಿದರು.

ಸಂಘದ ಅಧ್ಯಕ್ಷ ಚೇಂದ್ರಿಮಾಡ ಗಣೇಶ್, ಉಪಾಧ್ಯಕ್ಷ ಚಪ್ಪಂಡ ಹರೀಶ್, ಮಾಜಿ ಅಧ್ಯಕ್ಷ ಪುಗ್ಗೇರ ನಂದ, ಕಾವಾಡಿಚಂಡ ಗಣಪತಿ, ಕೊಡವ ಸಮಾಜದ ಕಾರ್ಯದರ್ಶಿ ಕುಲ್ಲಚಂಡ ಜಯಗಣಪತಿ, ಉದ್ಯಮಿ ಕೋಲತಂಡ ಬೋಪಯ್ಯ, ಎಸ್.ಬಿ.ಐ. ಬ್ಯಾಂಕ್‍ನ ವ್ಯವಸ್ಥಾಪಕ ಕಿರಣ್ ಹಾಗೂ ಸರ್ಕಲ್ ಇನ್ಸ್‍ಪೆಕ್ಟರ್ ಕ್ಯಾತೆಗೌಡ ಮತ್ತಿತರರು ಯೋಧರ ಸ್ತಂಭಕ್ಕೆ ಪುಷ್ಪ ನಮನ ಸಲ್ಲಿಸಿದರು.