ಕೂಡಿಗೆ, ಜು. 28: ಕೂಡಿಗೆ ಗ್ರಾಮ ಪಂಚಾಯಿತಿ ಸಭೆಯು ಗ್ರಾಮ ಪಂಚಾಯಿತಿ ಅಧಿಕಾರಿ, ಹಾರಂಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ವರದರಾಜ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಎಲ್ಲಾ ವಾರ್ಡ್‍ಗಳಲ್ಲಿ ಮೊದಲು ಶುಚಿತ್ವ ಕಾಪಾಡುವ ಬಗ್ಗೆ, ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ಬಗ್ಗೆ ಚರ್ಚೆ ಮಾಡಲಾಯಿತು. ಕುಡಿಯುವ ನೀರಿನ ಸಮಸ್ಯೆ ಎದುರಾದಾಗ ಹೊಸ ಕೊಳವೆ ಬಾವಿಯನ್ನು ಕೊರೆಸಲು ತೀರ್ಮಾನ ಕೈಗೊಳ್ಳಲಾಯಿತು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿಲ್ಪಾ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.