ಮಡಿಕೇರಿ, ಜು. 28 : ಕೋವಿಡ್-19 ಹಿನ್ನಲೆ ಬಕ್ರೀದ್ ಹಬ್ಬವನ್ನು ಸರ್ಕಾರದ ನಿರ್ದೇಶನದಂತೆ ಆಚರಿಸುವಂತೆ ಮುಸ್ಲಿಂ ಧಾರ್ಮಿಕ ಮುಖಂಡರಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮನವಿ ಮಾಡಿದ್ದಾರೆ. ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಧಾರ್ಮಿಕ ಮುಖಂಡರೊಂದಿಗೆ ಮಂಗಳವಾರ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ ನಿರ್ದೇಶನವನ್ನು ಕಡ್ಡಾಯವಾಗಿ ಪಾಲಿಸಬೇಕು, ಕಾನೂನು ಸುವ್ಯವಸ್ಥೆ ಕಾಪಾಡಬೇಕು ಮತ್ತು ಗೌರವಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಪ್ರಾರ್ಥನಾ ಸ್ಥಳದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, 60 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ಕಿಗಳು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡಬೇಕು ಎಂದು ಕೋರಿದರು.
ನಮಾಜ್ ನಿರ್ವಹಿಸುವವರ ಮಧ್ಯೆ ಕನಿಷ್ಟ 6 ಅಡಿ ಅಂತರ ಕಾಯ್ದು ಕೊಳ್ಳಬೇಕು, ಕೈಗಳನ್ನು ಸೋಪು ಅಥವಾ ಸ್ಯಾನಿಟೈಸರ್‍ನಿಂದ ಶುಚಿ ಗೊಳಿಸುವುದು