ಮಡಿಕೇರಿ, ಜು. 28: ಕೊಡಗು ಜಿಲ್ಲಾ ಎಲ್ಲಾ ಬ್ಯಾಂಕ್‍ಗಳ ಪಿಗ್ಮಿ ಸಂಗ್ರಾಹಕರ ಸಂಘದ ವಾರ್ಷಿಕ ಸಭೆ ಮಡಿಕೇರಿಯ ಕೋಟೆ ಮಹಿಳಾ ಸಮಾಜದ ಆವರಣದಲ್ಲಿ ಸಂಘದ ಅಧ್ಯಕ್ಷ ಎಂ.ಡಿ. ನಾಣಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಸದಸ್ಯರುಗಳ ಕುಂದು ಕೊರತೆಗಳನ್ನು ಆಲಿಸಿ ಅವುಗಳ ಬಗ್ಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ಸೂಕ್ತ ಪರಿಹಾರ ಕಂಡುಕೊಳ್ಳುವ ಬಗ್ಗೆ ತೀರ್ಮಾನಿಸಲಾಯಿತು.