ಕೂಡಿಗೆ, ಜು. 28: ಕುಶಾಲನಗರ ಗ್ರಾಮಾಂತರ ಪೆÇಲೀಸ್ ಠಾಣೆಯ ವತಿಯಿಂದ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ಪೆÇಲೀಸ್ ಠಾಣೆಯ ಆವರಣದಲ್ಲಿ ನಡೆಯಿತು. ಸಭೆಯಲ್ಲಿ ಠಾಣಾಧಿಕಾರಿ ನಂದೀಶ್ ಕುಮಾರ್ ಹಬ್ಬ ಆಚರಣೆ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಕಾನೂನು ನಿಯಮಗಳನ್ನು ಪಾಲನೆ ಮಾಡಬೇಕೆಂದು ಮನವಿ ಮಾಡಿದರು. ಗ್ರಾಮಾಂತರ ಠಾಣಾ ವ್ಯಾಪ್ತಿಗೆ ಒಳಪಡುವ ಎಲ್ಲಾ ಮಸೀದಿಯ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.