ಸೋಮವಾರಪೇಟೆ, ಜು. 28: ಸಮೀಪದ ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸತೋಟ ಗ್ರಾಮದಿಂದ ಗರಗಂದೂರು ಗ್ರಾಮದವರೆಗೆ ನೂತನವಾಗಿ ನಿರ್ಮಿಸಿರುವ ಕಾಂಕ್ರೀಟ್ ರಸ್ತೆಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು.

ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ರೂ. 8 ಕೋಟಿ ವೆಚ್ಚದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದ್ದು, ಸಾರ್ವಜನಿಕರಿಗೆ ಸೋಮವಾರಪೇಟೆಯಿಂದ ಸುಂಟಿಕೊಪ್ಪ, ಮಡಿಕೇರಿಗೆ ತೆರಳಲು ಅನುಕೂಲವಾಗಿದೆ ಎಂದರು.

ಈ ಸಂದರ್ಭ ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಭು, ಅಭಿಯಂತರ ಅಶೋಕ್ ರೆಡ್ಡಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಸುಮಾ, ಗ್ರಾಮ ಪಂಚಾಯಿತಿ ಸದಸ್ಯ ಗೌತಮ್ ಶಿವಪ್ಪ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲೋಕೇಶ್, ಗುತ್ತಿಗೆದಾರರಾದ ಬಿ.ಎಸ್. ಪಾಟೀಲ್, ಪ್ರಮುಖರಾದ ಅಮರೀಶ್ ಗೌಡ, ಸಲೀಂ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.