ಮುಳ್ಳೂರು, ಜು. 29: ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಎಎಸ್‍ಐ ಗೋವಿಂದ್ ಅವರು ನೊಂದವರು, ದುರ್ಬಲರು, ಬಡವರು, ಠಾಣೆಗೆ ದೂರು ನೀಡಲು ತೆರಳಿದರೆ ಅವರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದು, ಇದನ್ನು ದಲಿತ ಸಂಘಟನೆಗಳ ಜಿಲ್ಲಾ ಒಕ್ಕೂಟ ಖಂಡಿಸುತ್ತದೆ.
ಮೇಲಾಧಿಕಾರಿಗಳು ಎಎಸ್‍ಐ ಮೇಲೆ ಕ್ರಮಕೈಗೊಳ್ಳದಿದ್ದರೆ ಸಂಘಟನೆ ವತಿಯಿಂದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಮಾಡಲಾಗುತ್ತದೆ ಎಂದು ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಂ.ಎನ್. ರಾಜಪ್ಪ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದ್ದಾರೆ.
ರಾಜ್ಯ ಸಂಘಟನೆ ಸಂಯೋಜಕ ರಾಜಶೇಖರ್ ಮಾತನಾಡಿ, ಎಎಸ್‍ಐ ಮೇಲೆ ಹಿರಿಯ ಅಧಿಕಾರಿಗಳು ಕ್ರಮಕೈಗೊಂಡು ಸೇವೆಯಿಂದ ಅಮಾನತ್ತುಗೊಳಿಸಬೇಕು ಎಂದರು. ಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಎಂ.ಆರ್.ಮಲ್ಲೇಶ್, ದಲಿತ ಒಕ್ಕೂಟದ ಜಿಲ್ಲಾ ಸಂಘಟಕ ಪರಮೇಶ್ ಇದ್ದರು.