ಸೋಮವಾರಪೇಟೆ, ಜು. 29: ಬಕ್ರೀದ್ ಹಬ್ಬದ ಹಿನ್ನೆಲೆ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು.
ಪೊಲೀಸ್ ವೃತ್ತ ನಿರೀಕ್ಷಕ ನಂಜುಂಡೇಗೌಡ ಮಾತನಾಡಿ, ಶಾಂತಿಯುತವಾಗಿ ಬಕ್ರೀದ್ ಆಚರಿಸು ವಂತೆ ಸೂಚಿಸಿದರು. ಕೊರೊನಾ ಸಂಬಂಧಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸರ್ಕಾರದ ಆದೇಶ ಗಳನ್ನು ಪಾಲಿಸುವ ಮೂಲಕ ಹಬ್ಬ ಆಚರಿಸುವಂತೆ ತಿಳಿಸಿದರು. ಸಭೆಯಲ್ಲಿ ಪೊಲೀಸ್ ಠಾಣಾಧಿಕಾರಿ ಶಿವಶಂಕರ್, ಪ್ರಮುಖರಾದ ಕೆ.ಎ. ಯಾಕೂಬ್, ಇಬ್ರಾಹಿಂ ಸೇರಿದಂತೆ ಇತರರು ಉಪಸ್ಥಿತರಿದ್ದರು.