ಮಡಿಕೇರಿ, ಜು. 29: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಎಐಯುಟಿಯುಸಿ ಸಂಯೋಜಿತ ಆಶಾ ಕಾರ್ಯಕರ್ತೆಯರ ಸಂಘದ ಕೊಡಗು ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.ಆಶಾ ಕಾರ್ಯಕರ್ತೆಯರು ಕೊರೊನಾ ವಿರುದ್ಧ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ತಮಗೆ ವಹಿಸಲಾದ ಕಾರ್ಯವನ್ನು ಪ್ರಾಮಾಣಿಕತೆಯಿಂದ ನಿರ್ವಹಿ ಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ (ಮೊದಲ ಪುಟದಿಂದ) ರೂ. ವೇತನ ನಿಗದಿಪಡಿಸಬೇಕು. ಸುರಕ್ಷತಾ ಪರಿಕರಗಳನ್ನು ಒದಗಿಸಬೇಕು. ಆಗಿಂದಾಗ್ಗೆ ಆಶಾ ಕಾರ್ಯಕರ್ತೆ ಯರಿಗೆ ಆರೋಗ್ಯ ತಪಾಸಣೆ ಮಾಡಬೇಕು, ಕೊರೊನಾ ಪಾಸಿಟಿವ್ ಬಂದಿರುವ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಸಂಪೂರ್ಣ ಉಚಿತ ಚಿಕಿತ್ಸೆ ನೀಡಬೇಕು. ಈ ಅವಧಿಯಲ್ಲಿ ಗೌರವಧನ ಮತ್ತು ಪ್ರೋತ್ಸಾಹ ಧನ ನೀಡಬೇಕು. ಸೋಂಕಿತ ಆಶಾ ಕಾರ್ಯಕರ್ತೆ ಯರಿಗೆ ಪರಿಹಾರ ವ್ಯವಸ್ಥೆ ಕಲ್ಪಿಸಬೇಕು ಎಂಬ ಒತ್ತಾಯಗಳನ್ನು ಪ್ರತಿಭಟನಾಕಾರರು ಮಂಡಿಸಿದರು.
ಸಂಘದ ರಾಜ್ಯ ಸಮಿತಿ ಸದಸ್ಯ ಮುದ್ದು ಕೃಷ್ಣ ಮಾತನಾಡಿ, ಸರಕಾರ ಈಗಾಗಲೇ ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ಮಣಿದು ಮಾತುಕತೆಗೆ ಆಹ್ವಾನಿಸಿದೆ. ಆಶಾ ಕಾರ್ಯಕರ್ತೆ ಯರ ಬೇಡಿಕೆಗಳ ಈಡೇರಿಕೆಯೊಂದಿಗೆ ಸರಕಾರದಿಂದ ನಿರೀಕ್ಷಿತ ಸ್ಪಂದನ ಸಿಗದಿದ್ದರೆ ಹೋರಾಟ ಮುಂದುವರೆ ಯಲಿದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷೆ ತೆಕ್ಕಡೆ ಪೂರ್ಣಿಮಾ ಬಸಪ್ಪ, ಕಾರ್ಯದರ್ಶಿ ಸುಮನ್ ಉಮೇಶ್, ಕಾರ್ಯಕರ್ತರುಗಳು ಪಾಲ್ಗೊಂಡಿದ್ದರು.