ನಾಪೋಕ್ಲು, ಜು. 29: ಸಮೀಪದ ಎಮ್ಮೆಮಾಡು ಗ್ರಾ.ಪಂ. ವ್ಯಾಪ್ತಿಯ ಕೂರುಳಿಪರಂಬುವಿನಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ. 39 ವರ್ಷದ ಪುರುಷರೊಬ್ಬರಿಗೆ ಕೊರೊನಾ ಪಾಸಿಟಿವ್ ಕಾಣಿಸಿ ಕೊಂಡಿದ್ದು ಎಮ್ಮೆಮಾಡಿಗೆ ಕಂದಾಯ ಪರಿವೀಕ್ಷಕ ಶಿವಕುಮಾರ್, ಉಪ ತಹಶೀಲ್ದಾರ್ ಸಿದ್ದರಾಜು, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ವೀಣಾಕುಮಾರಿ, ಕಂದಾಯ ಇಲಾಖೆಯ ಹಾಗೂ ಗ್ರಾ.ಪಂ. ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.