ನವದೆಹಲಿ, ಜು. 29: ಕೊರೊನಾ ವೈರಸ್ ಭೀತಿಯಿಂದ ಹೇರಿದ್ದ ಲಾಕ್‍ಡೌನ್ ಬಗ್ಗೆ ಇದೀಗ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟ ಮಾಡಿದ್ದು, ಆ.1 ರಿಂದ ಅನ್ಲಾಕ್ 3.0 ನಿಯಮಗಳು ಜಾರಿಯಾಗಲಿದೆ. ಇದುವರೆಗೆ ಹೇರಲಾಗಿದ್ದ ರಾತ್ರಿ ಕಫ್ರ್ಯೂ ರದ್ದು ಮಾಡಲಾಗಿದೆ. ಆ. 31 ರವರೆಗೆ ಶಾಲಾ, ಕಾಲೇಜು ಓಪನ್ ಮಾಡುವಂತಿಲ್ಲ ಎಂದು ಸೂಚಿಸಿದೆ. ಆ. 5 ರಿಂದ ಯೋಗ, ಜಿಮ್, ಸ್ವಿಮ್ಮಿಂಗ್ ಪೂಲ್ ನಡೆಸಲು ಅವಕಾಶ ನೀಡಲಾಗುತ್ತಿದೆ. ಕಂಟೈನ್ಮೆಂಟ್ ಪ್ರದೇಶದಲ್ಲಿ ಆ. 31 ರವರೆಗೂ ಲಾಕ್‍ಡೌನ್ ಮುಂದುವರಿಯಲಿದ್ದು, ಮೂಲಭೂತ ಅವಶ್ಯಕ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. 65 ವರ್ಷ ಮೇಲ್ಪಟ್ಟ ಹಾಗೂ ಹತ್ತು ವರ್ಷದ ಕೆಳಗಿನ ಮಕ್ಕಳು ಮನೆಯಲ್ಲಿ ಇರಬೇಕು. ಅವಶ್ಯಕ ಕೆಲಸಗಳಿಗೆ ಮಾತ್ರ ಹೊರಹೋಗಬೇಕು.

ಇನ್ನು ವಂದೇ ಭಾರತ್ ಮಿಷನ್ ಅಡಿ ಸೀಮಿತ ಅಂತರರಾಷ್ಟ್ರೀಯ ವಿಮಾನ ಹಾರಾಟಕ್ಕೆ ಕೂಡ ಅವಕಾಶ ಕಲ್ಪಿಸಲಾಗಿದೆ. ಎಲ್ಲರೂ ಈ ಹಿಂದೆ ತಿಳಿಸಿದಂತೆ ಕೊರೊನಾ ಮುನ್ನೆಚ್ಚರಿಕಾ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಅಲ್ಲದೆ ಆರೋಗ್ಯ ಸೇತು ಬಳಕೆ ಮುಂದುವರಿಸುವಂತೆ ತಿಳಿಸಲಾಗಿದೆ.