ಮಡಿಕೇರಿ, ಜು. 29: ಅರುಣ ಪ್ರೌಢಶಾಲೆ ಚೇರಂಬಾಣೆಯಲ್ಲಿ ಅನುದಾನಿತ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕವನ್ನು ವಿತರಿಸಲಾಯಿತು. ವಿದ್ಯಾಸಂಸ್ಥೆಯ ಅಧ್ಯಕ್ಷ ಪೆÇಡನೊಳಂಡ ಸುಬ್ಬಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಎ.ಟಿ. ಬಾಲಕೃಷ್ಣ ಪ್ರಾಸ್ತಾವಿಕ ನುಡಿಯ ಮೂಲಕ ಶಿಕ್ಷಣ ಇಲಾಖೆಯಿಂದ ನೀಡಿರುವ ಆದೇಶ ವಿದ್ಯಾಗಮದ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

ತಾಲೂಕು ಪಂಚಾಯಿತಿ ಸದಸ್ಯ ದಬ್ಬಡ್ಕ ಶ್ರೀಧರ್ ಪುಸ್ತಕ ವಿತರಣೆ ಮಾಡಿ ಮಕ್ಕಳ ಕಲಿಕೆಯಲ್ಲಿ ಪೋಷÀಕರ ಪಾತ್ರ ಹಾಗೂ ಜವಾಬ್ದಾರಿ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳ ಕಲಿಕೆಗೆ ಸಂಸ್ಥೆಯಿಂದ ಎಲ್ಲಾ ರೀತಿಯ ಸಹಕಾರ ಹಾಗೂ ಸೌಲಭ್ಯ ಒದಗಿಸಲಾಗುವುದೆಂದು ಅಧ್ಯಕ್ಷರು ತಿಳಿಸಿದರು. ಶಿಕ್ಷಕ ಪರಮೇಶ್ವರ್ ನಿರೂಪಿಸಿ, ಶಿಕ್ಷಕ ಸತೀಶ್ ಕುಮಾರ್ ವಂದಿಸಿದರು. ಕಾರ್ಯದರ್ಶಿ ದಾಯನ ಶಿವಾಜಿ, ಖಜಾಂಚಿ ಚಿಯಬೇರ ಉತ್ತಯ್ಯ ಹಾಜರಿದ್ದರು.