ಶನಿವಾರಸಂತೆ, ಜು. 30: ಸಮೀಪದ ಕೊಡ್ಲಿಪೇಟೆ ಕ್ಲಸ್ಟರ್ ವ್ಯಾಪ್ತಿಯ ಕಿರಿಕೊಡ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ಕಾರದ ಉಚಿತ ಪಠ್ಯಪುಸ್ತಕಗಳನ್ನು ಪೋಷಕರ ಸಮ್ಮುಖದಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಕಾಶ್ ನಾಯಕ್, ಮುಖ್ಯ ಶಿಕ್ಷಕ ಜಯಂತ್, ಸಿ.ಆರ್.ಪಿ. ಸುರೇಶ್ ಹಾಜರಿದ್ದರು.