ಮಡಿಕೇರಿ, ಜು. 30: ಜಿಲ್ಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯು (ಸಿಇಟಿ) ಗುರುವಾರ ಸುಸೂತ್ರವಾಗಿ ನಡೆಯಿತು.
ಮಡಿಕೇರಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 451 ವಿದ್ಯಾರ್ಥಿಗಳು, ಸಂತ ಜೋಸೆಫರ ಕಾಲೇಜಿನಲ್ಲಿ 285 ವಿದ್ಯಾರ್ಥಿಗಳು, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 148, ವೀರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 184, ಒಟ್ಟು 1068 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 94 ವಿದ್ಯಾರ್ಥಿಗಳು ಗೈರು ಆಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಶಿವಲಿಂಗ ಶೆಟ್ಟಿ ತಿಳಿಸಿದ್ದಾರೆ. ಕೋವಿಡ್-19 ಹಿನ್ನೆಲೆ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂದು ಅವರು ತಿಳಿಸಿದ್ದಾರೆ.