ಸಿದ್ದಾಪುರ, ಜು. 30 : ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ಮೀನುಕೊಲ್ಲಿ ಅರಣ್ಯ ವ್ಯಾಪ್ತಿಯ ನೆಲ್ಲಿಹುದಿಕೇರಿ, ಬೆಟ್ಟದಕಾಡು, ಅಭ್ಯತ್ ಮಂಗಲ, ಅರೆಕಾಡು, ವಾಲ್ನೂರು ತ್ಯಾಗತ್ತೂರು ಗ್ರಾಮಗಳ ಕಾಫಿ ತೋಟಗಳಲ್ಲಿ ಬೀಡು ಬಿಟ್ಟರುವ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ತಾ. 1 ಹಾಗೂ 2 ರಂದು ನಡೆಯಲಿದೆ ಎಂದು ಕುಶಾಲನಗರ ಉಪ ವಲಯ ಅರಣ್ಯ ಅಧಿಕಾರಿ ಕೂಡಕಂಡಿ ಸುಬ್ರಾಯ ತಿಳಿಸಿದ್ದಾರೆ. ಈ ಎರಡು ದಿನಗಳ ಬೆಳಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ಕಾರ್ಯಾಚರಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಈ ಭಾಗದ ಗ್ರಾಮಸ್ಥರು ತೋಟ ಕಾರ್ಮಿಕರು, ವಾಹನ ಚಾಲಕರು ಎಚ್ಚರ ವಹಿಸಬೇಕೆಂದು ಹಾಗೂ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಯೊಂದಿಗೆ ಸಹಕರಿಸಬೇಕೆಂದು ಸುಬ್ರಾಯ ಮನವಿ ಮಾಡಿದ್ದಾರೆ.