ಕೂಡಿಗೆ, ಆ. 1: ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಸನ ಹೆದ್ದಾರಿಗೆ ಹೊಂದಿಕೊಂಡಂತೆ ಇರುವ ಶಿರಂಗಾಲ-ಮುಡಲಕೊಪ್ಪಲು ಗ್ರಾಮಕ್ಕೆ ಹೋಗುವ ರಸ್ತೆಯು ತೀರಾ ಹಾಳಾಗಿದ್ದು, ಸಣ್ಣ ವಾಹನಗಳು ಸಹ ಚಾಲಿಸಲು ಸಾಧ್ಯವಾಗುತ್ತಿಲ್ಲ. ಈ ರಸ್ತೆಯನ್ನು ದುರಸ್ತಿಪಡಿಸಲು ಗ್ರಾಮಸ್ಥರ ಆಗ್ರಹವಾಗಿದೆ.

ಕಳೆದ ಆರು ತಿಂಗಳುಗಳ ಹಿಂದೆ ಮಡಿಕೇರಿ ಕ್ಷೇತ್ರದ ಶಾಸಕರು ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಕಾಮಗಾರಿಯನ್ನು ಜಿಲ್ಲಾ ಪಂಚಾಯಿತಿ ಇಂಜಿನಿಯರ್ ನಿರ್ವಹಣೆಯಲ್ಲಿ ನಡೆಯುವುದು ಎಂದು ತಿಳಿಸಿದರು. ಯಾವುದೇ ಕಾಮಗಾರಿ ನಡೆಯುತ್ತಿಲ್ಲ ಎಂಬದು ಗ್ರಾಮಸ್ಥರ ಆರೋಪವಾಗಿದೆ. ಈ ಕಾಮಗಾರಿಗೆ ಸಂಬಂಧಿಸಿದ ಅಧಿಕಾರಿ ವರ್ಗದವರು ತುರ್ತಾಗಿ ಸ್ಪಂದಿಸಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂಬದು ಗ್ರಾಮಸ್ಥರ ಒತ್ತಾಯವಾಗಿದೆ.