ಮಡಿಕೇರಿ, ಆ. 1: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2019-20ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಆರ್ಥಿಕವಾಗಿ ಹಿಂದುಳಿದ ಅರ್ಹ ಮಹಿಳೆಯರು ಮತ್ತು ಸ್ತ್ರೀ ಶಕ್ತಿ ಗುಂಪುಗಳಿಗೆ ಬ್ಯಾಂಕ್ ಸಾಲ ಹಾಗೂ ನಿಗಮದ ಸಹಾಯಧನದೊಂದಿಗೆ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕಿರುಸಾಲ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸ್ತ್ರೀಶಕ್ತಿ ಸ್ವ-ಸಹಾಯ ಗುಂಪಿನ ಸದಸ್ಯರುಗಳಿಗೆ ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಪ್ರತಿ ಗುಂಪಿಗೆ ರೂ. 1 ಲಕ್ಷದಿಂದ 2 ಲಕ್ಷಗಳವರೆಗೆ ಬಡ್ಡಿ ರಹಿತ ಸಾಲವನ್ನಾಗಿ ನೀಡಲಾಗುವುದು.
18 ರಿಂದ 60 ವರ್ಷ ವಯೋಮಿತಿಯಲ್ಲಿರಬೇಕು. ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅವರಿಂದ ಬೀದಿಬದಿ ವ್ಯಾಪಾರಿ ಎಂದು ದೃಢೀಕರಿಸಿದ ದಾಖಲೆಯನ್ನು ಪಡೆದಿರಬೇಕು. ಮತದಾರರ ಗುರುತಿನ ಚೀಟಿ, ಆಧಾರ ಕಾರ್ಡ್ ಮತ್ತು ಬಿಪಿಎಲ್ ಕಾರ್ಡ್‍ಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿ ಕಡ್ಡಾಯವಾಗಿ ಖಾತೆಯನ್ನು ಹೊಂದಿರಬೇಕು.
ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ ಇಲ್ಲಿ ಈ ಯೋಜನೆಯ ಅರ್ಜಿಗಳು ಲಭ್ಯವಿದ್ದು ಅರ್ಹ ಮಹಿಳೆಯರು ಈ ಕಚೇರಿಗಳಿಂದ ಅರ್ಜಿ ಪಡೆದು ಸೂಕ್ತ ದಾಖಲೆಗಳೊಂದಿಗೆ ತಾ. 7 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ದೂ. 7996368687 ನ್ನು ಸಂಪರ್ಕಿಸಬಹುದು.