*ಗೋಣಿಕೊಪ್ಪಲು, ಆ. 1: ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅನುದಾನದ ರೂ. 5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕುಡಿಯುವ ನೀರಿನ ಘಟಕವನ್ನು ಹಾತೂರು ಗ್ರಾಮ ಪಂಚಾಯಿತಿಯ ಅತ್ತೂರು ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಕೆ. ಬೋಪಣ್ಣ ಉದ್ಘಾಟಿಸಿದರು. ಗ್ರಾ.ಪಂ. ಸದಸ್ಯರುಗಳಾದ ಕುಲ್ಲಚಂಡ ಚಿಣ್ಣಪ್ಪ, ಸುಭಾಷ್ ಮ್ಯಾಥ್ಯು, ಸಾವಿತ್ರಮ್ಮ, ಆಶಾಲತಾ, ದಿನೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಸ್ಮಾ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.