ನಾಪೆÇೀಕ್ಲು, ಆ. 1 : ಇಲ್ಲಿಗೆ ಸಮೀಪದ ಕಕ್ಕುಂದಕಾಡು ವೆಂಕಟೇಶ್ವರ ದೇವಾಲಯದಲ್ಲಿ ಶ್ರಾವಣ ಶನಿವಾರ ಹಬ್ಬವನ್ನು ಆಚರಿಸಲಾಯಿತು. ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಅರ್ಚಕ ಸುಧೀರ್ ಕೇಕುಣ್ಣಾಯ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಮಧ್ಯಾಹ್ನ ಮಹಾಪೂಜೆಯ ಬಳಿಕ ಭಕ್ತರಿಗೆ ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಕೊರೊನಾ ಸಂಕಷ್ಟದಿಂದಾಗಿ ಭಕ್ತರು ಕಡಿಮೆ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.