ಸಿದ್ದಾಪುರ, ಆ. 2: ನೆಲ್ಲಿಹುದಿಕೇರಿ ಗ್ರಾಮದ ಎಂಜಿ ಕಾಲೋನಿಯಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನಾ ಪತ್ತೆಯಾದ ಹಿನ್ನೆಲೆಯಲ್ಲಿ ಆ ಭಾಗದ ಕೆಲವು ಮನೆಗಳನ್ನು ಸೀಲ್‍ಡೌನ್ ಮಾಡಲಾಯಿತು. ಈ ಸಂದರ್ಭ ಗ್ರಾಮಲೆಕ್ಕಿಗ ಸಂತೋಷ್ ಪಿಡಿಓ ಅನಿಲ್ ಕುಮಾರ್ ಹಾಗೂ ಆರೋಗ್ಯ ಇಲಾಖೆಯ ಲೀನಾ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರುಗಳು ಹಾಜರಿದ್ದರು