ಪೆÇನ್ನಂಪೇಟೆ, ಆ. 3: ವ್ಯಕ್ತಿಯೊಬ್ಬರು ರಸ್ತೆಗೆ ಅಡ್ಡಲಾಗಿ ಬೇಲಿ ಹಾಕಿದ ಪರಿಣಾಮ ಸಾರ್ವಜನಿಕರ ಸಂಚಾರ ಸ್ಥಗಿತಗೊಂಡು ವಿವಾದ ಉಂಟಾಗಿರುವ ನೆಲ್ಲಿಹುದಿಕೇರಿ ಸಮೀಪ ಅತ್ತಿಮಂಗಲ - ಬರಡಿ ರಸ್ತೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಕಾನೂನು, ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ಕಾಯ್ದೆ ಘಟಕದ ಅಧ್ಯಕ್ಷರಾದ ಎ.ಎಸ್.ಪೆÇನ್ನಣ್ಣ ಅವರು ಭೇಟಿ ನೀಡಿ ಪರಿಶೀಲಿಸಿದರು.

ಸ್ಥಳೀಯ ಕಾಂಗ್ರೆಸ್ ಪ್ರಮುಖರ ಮನವಿಯ ಮೇರೆಗೆ ಸ್ಥಳಕ್ಕೆ ಬೇಟಿ ನೀಡಿದ ರಾಜ್ಯ ಹೈಕೋರ್ಟ್‍ನ ಹಿರಿಯ ವಕೀಲರೂ ಆಗಿರುವ ಅಜ್ಜಿಕುಟ್ಟೀರ ಎಸ್. ಪೆÇನ್ನಣ್ಣ ಸ್ಥಳದಲ್ಲಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಿಂದ ರಸ್ತೆಗೆ ಸಂಬಂಧಿತ ಮಾಹಿತಿಯನ್ನು ಪಡೆದುಕೊಂಡರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ಇದರ ಬಗ್ಗೆ ಸಂಬಂಧಿಸಿದವರೊಂದಿಗೆ ಸಮಾಲೋಚನೆ ನಡೆಸಿ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಪೆÇನ್ನಣ್ಣ ಭರವಸೆ ನೀಡಿದರು. ಬಂದ್ ಮಾಡಿರುವ ರಸ್ತೆಯನ್ನು ತೆರವುಗೊಳಿಸುವ ಮೂಲಕ ಸಮಸ್ಯೆಯನ್ನು ಬಗೆಹರಿಸಿ ಕೊಡಬೇಕೆಂದು ಹಿರಿಯ ವಕೀಲರಾದ ಎ.ಎಸ್.ಪೆÇನ್ನಣ್ಣ ಹಾಗೂ ಐ.ಎನ್.ಟಿ.ಯು. ಸಿ. ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಅವರಿಗೆ ಗ್ರಾಮಸ್ಥರ ಪರವಾಗಿ ಮನವಿಪತ್ರ ನೀಡಲಾಯಿತು.

ಸ್ಥಳ ಪರಿಶೀಲನೆ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅನಂತ್‍ಕುಮಾರ್, ಸೋಮವಾರಪೇಟೆ ತಾಲೂಕು ಪಂಚಾಯಿತಿ ಸದಸ್ಯೆ ಸುಹಾದ ಅಶ್ರಫ್, ನೆಲ್ಯಹುದಿಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಸಾಬು ವರ್ಗಿಸ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್, ಸಿದ್ದಾಪುರ ಪೆÇಲೀಸ್ ಠಾಣಾಧಿಕಾರಿ ಮೋಹನ್ ರಾಜ್, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ನರೇನ್ ಕಾರ್ಯಪ್ಪ ಮತ್ತಿತರರಿದ್ದರು.