ಕೂಡಿಗೆ, ಆ 3: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಪ್ರಾಥಮಿಕ ಪಶು ಆರೋಗ್ಯ ಕೇಂದ್ರದಲ್ಲಿ ನೌಕರರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಸುಶೀಲಾ ಅವರಿಗೆ ಹುದುಗೂರು ಗ್ರಾಮಸ್ಥರು ಮತ್ತು ಯುವಕ ಸಂಘದ ವತಿಯಿಂದ ಸನ್ಮಾನಿಸಿ, ಬೀಳ್ಕೋಡ ಲಾಯಿತು.
ಈ ಸಂದರ್ಭ ಉಮಾ ಮಹೇಶ್ವರ ದೇವಾಲಯ ಸಮಿತಿಯ ಅಧ್ಯಕ್ಷ. ಟಿ.ಎಂ.ಚಾಮಿ, ಕೂಡಿಗೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಪ್ರೇಮಲೀಲಾ, ಶೋಭಾಪುಟ್ಟಪ, ನೀರು ಬಳಕೆದಾರರ ಸಂಘದ ಮಾಜಿ ಅಧ್ಯಕ್ಷ. ಐ ಎಸ್ ಗಣೇಶ್ ಯುವಕ ಸಂಘದ ಅಧ್ಯಕ್ಷ ಗಿರೀಶ್ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.