ಭಾಗಮಂಡಲ, ಆ. 3: ಪರಿಸರ ಸಂರಕ್ಷಣೆ ಇಂದಿನ ತುರ್ತು ಅಗತ್ಯವಾಗಿದ್ದು, ಅರಣ್ಯಗಳ ಯಥಾಸ್ಥಿತಿಯನ್ನು ಕಾಪಾಡಬೇಕು ಎಂದು ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.

ಮಡಿಕೇರಿ ತಾಲೂಕು ಬಿಜೆಪಿ ವತಿಯಿಂದ ರೈತ ಮೋರ್ಚಾದ ಸಹಯೋಗದೊಂದಿಗೆ ಭಾಗಮಂಡಲ - ತಲಕಾವೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾಗಮಂಡಲ - ತಲಕಾವೇರಿ ಜಿಲ್ಲೆಯ ಪ್ರಮುಖ ಯಾತ್ರಾಸ್ಥಳಗಳಾಗಿದ್ದು ಕಾವೇರಿಯ ಪಾವಿತ್ರ್ಯತೆಯನ್ನು ಉಳಿಸಿಕೊಳ್ಳಬೇಕು. ಇದಕ್ಕೆ ಸರ್ವರ ಸಹಕಾರ ಅಗತ್ಯ ಎಂದರು. ಕಾರ್ಯಕ್ರಮದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಕಾಂಗೀರ ಸತೀಶ್, ರಾಜ್ಯ ಕಾರ್ಯದರ್ಶಿ ಅಪ್ಪಚೆಟ್ಟೋಳಂಡ ಮನುಮುತ್ತಪ್ಪ, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಡೀನ್‍ಬೋಪಣ್ಣ, ಜಿಲ್ಲಾ ಯುವಮೋರ್ಚಾ ಮಾಜಿ ಅಧ್ಯಕ್ಷ ಕಾಳನ ರವಿ, ರೈತ ಮೋರ್ಚಾ ಅಧ್ಯಕ್ಷ ಶಿವಚಾಳಿಯಂಡ ಜಗದೀಶ್, ಭಾಗಮಂಡಲ -ತಲಕಾವೇರಿ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿದ್ದಾಟಂಡ ಎಸ್.ತಮ್ಮಯ್ಯ, ಪ್ರಮುಖರಾದ ನಾರಾಯಣಾಚಾರ್, ಕೋಡಿರ ಪ್ರಸನ್ನ, ರಾಜೀವ್, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಕಾರ್ಯಕರ್ತರು ಪಾಲ್ಗೊಂಡಿದ್ದರು. ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಸಂದರ್ಭದಲ್ಲಿ ಸರ್ಕಾರದ ಸಾಧನೆಗಳನ್ನು ಮನೆಮನೆಗೆ ಭೇಟಿ ನೀಡಿ ತಿಳಿಸಲಾಯಿತು.