ಸೋಮವಾರಪೇಟೆ ಪಟ್ಟಣ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿದ್ದು, 2 ದಿನದ ಮಟ್ಟಿಗೆ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಸಾರ್ವಜನಿಕರು ದೂರುಗಳ ಸಂಬಂಧ ಪಟ್ಟಣದ ವೃತ್ತ ನಿರೀಕ್ಷಕರ ಕಚೇರಿಯನ್ನು ಭೇಟಿ ಮಾಡಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ತಿಳಿಸಿದ್ದಾರೆ.