ಸಿದ್ದಾಪುರ, ಆ. 4: ಚೆಟ್ಟಳ್ಳಿ ಗ್ರಾ.ಪಂ. ವ್ಯಾಪ್ತಿಯ ಕೂಡ್ಲೂರು ಚೆಟ್ಟಳ್ಳಿಯಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಆ ಭಾಗದಲ್ಲಿರುವ ಮನೆಗಳನ್ನು ಸೀಲ್‍ಡೌನ್ ಮಾಡಲಾಯಿತು. ಈ ಸಂದರ್ಭ ಕುಶಾಲನಗರ ಹೋಬಳಿ ಕಂದಾಯ ಪರಿವೀಕ್ಷಕ ಮಧುಸೂದನ್, ಗ್ರಾಮಲೆಕ್ಕಿಗ ಸಂತೋಷ್, ಪಿ.ಡಿ.ಓ ನಂದೀಶ್ ಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯೆ ಸುನಿತಾ ಮಂಜುನಾಥ್, ಹಾಗೂ ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.