ಮಡಿಕೇರಿ, ಆ. 5: ಕೊಡಗು ಜಿಲ್ಲೆಯಲ್ಲಿ ಕಳೆದ 4 ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಇದರಿಂದ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಿದೆ.

ಕೊಡಗು ಜಿಲ್ಲೆಯ ಕುಶಾಲನಗರ-ಪೆÇನ್ನಂಪೇಟೆ 66 ಕೆ.ವಿ ವಿದ್ಯುತ್ ಮಾರ್ಗಕ್ಕೆ 4 ರಿಂದ 5 ಕಡೆ ಬೃಹತ್ ಮರಗಳು ತುಂಡಾಗಿ ಬಿದ್ದಿದ್ದು, ತೆರವುಗೊಳಿಸುವ ಕಾರ್ಯ ನಡೆದಿದೆ.

ಸದ್ಯ ಈ ವಿದ್ಯುತ್ ಮಾರ್ಗದಲ್ಲಿ ಭಾರಿ ಗಾತ್ರದ ಮರಗಳು ತುಂಡಾಗಿ ಬಿದ್ದಿರುವುದರಿಂದ ಕೊಡಗು ಜಿಲ್ಲೆಯ ದಕ್ಷಿಣ ಭಾಗದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ.

ಹಾಗೆಯೇ ಜಿಲ್ಲೆಯ ಎಲ್ಲಾ ಭಾಗದಲ್ಲಿಯೂ ವ್ಯಾಪಕ ಮಳೆಯಾಗುತ್ತಿರುವುದರಿಂದ ಅಲ್ಲಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ಅಡಚಣೆ ಹಾಗೂ ಇತರೆ ಸಮಸ್ಯೆಗಳ ಬಗ್ಗೆ 1912 ಸಹಾಯವಾಣಿಗೆ ಸಾರ್ವಜನಿಕರು ಮಾಹಿತಿ ನೀಡಿ ಸಹಕರಿಸುವಂತೆ ಸೆಸ್ಕ್ ಇಇ ಸೋಮಶೇಖರ್ ಕೋರಿದ್ದಾರೆ.