ನಾಪೋಕ್ಲು, ಆ. 4: ಅಮ್ಮತ್ತಿ-ಕಣ್ಣಂಗಾಲ ಕಾರ್ಯಕ್ಷೇತ್ರದಲ್ಲಿ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಕೆಗೆ ಹಾಗೂ ಇತರ ಅಭಿವೃದ್ಧಿ ಕಾರ್ಯಕ್ಕಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಂಜೂರು ಗೊಂಡ ರೂ. 2 ಲಕ್ಷ ಮೊತ್ತದ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಯೋಜನಾದಿ üಕಾರಿ, ರುದ್ರಭೂಮಿ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸ್ಥಳೀಯ ಮುಖಂಡರು ಇದ್ದರು.