ಮಡಿಕೇರಿ, ಆ. 4: ಅಯೋಧ್ಯೆಯಲ್ಲಿ ತಾ. 5 ರಂದು (ಇಂದು) ಶ್ರೀ ರಾಮ ಮಂದಿರ ನಿರ್ಮಾಣದ ಭೂಮಿಪೂಜೆ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸುತ್ತಿರುವ ಹಿನ್ನೆಲೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯವರ ನಿರ್ದೇಶನದಂತೆ ಹಾಗೂ ಧಾರ್ಮಿಕ ದತ್ತಿ ಇಲಾಖೆ ಸಚಿವರ ಸೂಚನೆಯಂತೆ ರಾಜ್ಯದ ಎಲ್ಲಾ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಹಾಗೂ ರಾಜ್ಯಾದ್ಯಂತ ಇರುವ ಎಲ್ಲಾ ಖಾಸಗಿ ದೇವಾಲಯಗಳಲ್ಲಿ ಶಿಲಾನ್ಯಾಸ ಕಾರ್ಯಕ್ರಮದ ಸಂದರ್ಭದಲ್ಲಿ ಅರ್ಚಕರುಗಳ ಮೂಲಕ ವಿಶೇಷ ಪೂಜೆ ಮತ್ತು ಪ್ರಾರ್ಥನೆಯನ್ನು (ಕೋವಿಡ್-2019 ನಿಯಮ ಪಾಲಿಸಿಕೊಂಡು) ಸಲ್ಲಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.