ಸಿದ್ದಾಪುರ, ಆ. 4: ವಾಲ್ನೂರು ಗ್ರಾಮದಲ್ಲಿ ಎರಡು ಮಂದಿಗೆ ಕೊರೊನಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಆ ಭಾಗದಲ್ಲಿರುವ ಕಾರ್ಪೋರೇಷನ್ ಬ್ಯಾಂಕ್ ಸೇರಿದಂತೆ ಮನೆಗಳನ್ನು ಸೀಲ್‍ಡೌನ್ ಮಾಡಲಾಯಿತು. ಈ ಸಂದರ್ಭ ಸೋಮವಾರಪೇಟೆ ತಹಶೀಲ್ದಾರ್ ಗೋವಿಂದರಾಜು ಹಾಗೂ ಕುಶಾಲನಗರ ಹೋಬಳಿ ಕಂದಾಯ ಪರಿವೀಕ್ಷಕ ಮಧುಸೂದನ್, ಗ್ರಾಮಲೆಕ್ಕಿಗರಾದ ಅನುಷ, ಪಿಡಿಓ ಅನಿಲ್ ಕುಮಾರ್, ಕಾರ್ಯದರ್ಶಿ ರವಿ, ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.