ಮಡಿಕೇರಿ, ಆ. 6: ಪ್ರಸಕ್ತ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆ ಅಡಿಯಲ್ಲಿ 2019 ರಲ್ಲಿ (1.1.2019 ರಿಂದ 31.12.2019) ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟದಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮ ಅನುಷ್ಠಾನಗೊಳಿಸಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಕ್ರೀಡಾಪಟುಗಳು ಇಲಾಖಾ ಅಧಿಕೃತ ಜಾಲತಾಣ hಣಣಠಿ://ಞಚಿಡಿuಟಿಚಿಜu.ಞಚಿಡಿಟಿಚಿಣಚಿಞಚಿ.gov.iಟಿ/ಜಥಿes ಮೂಲಕ ಆನ್‍ಲೈನ್‍ನಲ್ಲಿ ತಾ. 30 ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.