ಮಡಿಕೇರಿ, ಆ. 6: ಸೋಮವಾರಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಕೋವಿಡ್-19 ವೈರಾಣು ಶೀಘ್ರಗತಿಯಲ್ಲಿ ಹರಡುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪ್ರತಿ ವಾರದ ಸಂತೆಯನ್ನು ಮುಂದಿನ ಆದೇಶದವರೆಗೆ ರದ್ದುಪಡಿಸಲಾಗಿರುತ್ತದೆ. ಸಾರ್ವಜನಿಕರು ಮತ್ತು ವರ್ತಕರು ಸಹಕರಿಸುವಂತೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ಕೆ. ನಾಚಪ್ಪ ತಿಳಿಸಿದ್ದಾರೆ.