ಮಡಿಕೇರಿ, ಆ. 6 : ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ತಾ. 7 ರಂದು (ಇಂದು) ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಜಿಲ್ಲೆಯಲ್ಲಿ ಪ್ರವಾಹ ಹಾಗೂ ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ಮತ್ತು ಪರಿಶೀಲನೆ ಮಾಡಲಿದ್ದಾರೆ. ನಂತರ ಜಿಲ್ಲೆಯಲ್ಲಿ ಕೈಗೊಂಡ ಪ್ರಕೃತಿ ವಿಕೋಪ ನಿರ್ವಹಣೆ ಹಾಗೂ ಪರಿಹಾರ ಕ್ರಮಗಳ ಕುರಿತಂತೆ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.
ಬಳಿಕ ಕೊರೊನಾ (ಕೋವಿಡ್-19) ನಿರ್ವಹಣೆ ಬಗ್ಗೆ ಕೊಡಗು ಜಿಲ್ಲೆಯಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳು ಸೇರಿದಂತೆ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ.ನರೇಂದ್ರ ತಿಳಿಸಿದ್ದಾರೆ.