ಮಡಿಕೇರಿ, ಆ. 7: ಜಿಲ್ಲೆಯಲ್ಲಿ ತಾ. 8ರಂದು (ಇಂದು) ಬೆಳಿಗ್ಗೆ 8.30 ರವರೆಗೆ ರೆಡ್, ನಂತರ ತಾ. 11ರಂದು ಬೆಳಿಗ್ಗಿನವರೆಗೆ ಆರೆಂಜ್ ಅಲರ್ಟ್‍ನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡಿದೆ. ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿ ಸಂಖ್ಯೆಯಗಳನ್ನು ಸಂಪರ್ಕಿಸಬಹುದಾಗಿದೆ. ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24x7 ಕಂಟ್ರೋಲ್ ರೂಂ 08272-221077, ವಾಟ್ಸ್ಯಾಪ್ 8550001077