ಮಡಿಕೇರಿ, ಆ. 7: ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಸಂಘ-ಸಂಸ್ಥೆಗಳ ವಾರ್ಷಿಕ ಮಹಾಸಭೆಯನ್ನು ನಡೆಸುವ ಅವಧಿಯನ್ನು ವಿಸ್ತರಿಸಿ ಸರಕಾರ ಆದೇಶ ಹೊರಡಿಸಿದೆ.

ಇದರಂತೆ ವಿವಿಧ ಸಂಘ-ಸಂಸ್ಥೆಗಳು ತಮ್ಮ ಸಂಘದ ವಾರ್ಷಿಕ ಮಹಾಸಭೆಯನ್ನು ನಡೆಸಲು ಡಿಸೆಂಬರ್ ಅಂತ್ಯದವರೆಗೆ ಅವಕಾಶ ನೀಡಿ ಅವಧಿ ವಿಸ್ತರಿಸಲಾಗಿದೆ. ಈ ಕುರಿತು ಸಹಕಾರ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಮನೋರಮಾ ಡಿ.ಸಿ. ಆದೇಶ ಹೊರಡಿಸಿದ್ದಾರೆ.