ಕೂಡಿಗೆ, ಆ. 7 : ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಯಿಂದಾಗಿ ಈ ವ್ಯಾಪ್ತಿಯ ನೂರಾರು ರೈತರ ಜೋಳ ಮತ್ತು ಶುಂಠಿ ಬೆಳೆಗಳು ನೀರಿನಲ್ಲಿ ಮುಳುಗಡೆ ಯಾಗಿವೆ.

ಕುಶಾಲನಗರ ಹೋಬಳಿ ವ್ಯಾಪ್ತಿಯ ಕೂಡಿಗೆ ಕೂಡು ಮಂಗಳೂರು, ಹೆಬ್ಬಾಲೆ, ತೊರೆನೂರು ಗ್ರಾಮಗಳ ನೂರಾರು ಎಕರೆ ಪ್ರದೇಶದಲ್ಲಿ ಬೆಳೆಸಲಾದ ಬೆಳೆಗಳು ಜಲಾವೃತಗೊಂಡಿವೆ.

ಈ ವ್ಯಾಪ್ತಿಯ ತಗ್ಗುಪ್ರದೇಶದಲ್ಲಿ ಬೆಳೆಸಲಾಗಿದ್ದ ಕೆಲ ರೈತರ ಬೆಳೆ ನೀರಿನಲ್ಲಿ ತೇಲುತ್ತಿದೆ. ಕೂಡಿಗೆÀ - ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿ ನದಿಯ ತಗ್ಗುಪ್ರದೇಶದಲ್ಲಿ ವಾಸಿಸುತ್ತಿದ್ದ ಅನೇಕ ಮನೆಯವರು ತಮ್ಮ ಮನೆಗಳಿಂದ ಸಾಮಗ್ರಿಗಳನ್ನು ಬೇರೆಡೆಗೆ ಸಾಗಾಟ ಮಾಡಿದ್ದಾರೆ.