ಕುಶಾಲನಗರ, ಆ. 7: ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಕಾವೇರಿ ನದಿ ಪ್ರವಾಹ ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು ಮಡಿಕೇರಿ-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದ್ದು, ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಮಡಿಕೇರಿ-ಕುಶಾಲನಗರ ರಸ್ತೆಯ ಗಂಧದಕೋಟಿ, ತಾವರೆಕೆರೆ ಬಳಿ ರಸ್ತೆ ಮೇಲೆ ಕೆಲವು ಅಡಿಗಳಷ್ಟು ನೀರು ನಿಂತಿದ್ದು ವಾಹನ ಸವಾರರು ಹಾರಂಗಿ ಮೂಲಕ ಪರ್ಯಾಯ ರಸ್ತೆಯಲ್ಲಿ ತೆರಳುತ್ತಿದ್ದಾರೆ. ಹೆಚ್ಚಿನ ಮಳೆ ಬೀಳುತ್ತಿರುವ ಹಿನ್ನಲೆಯಲ್ಲಿ ಪಟ್ಟಣದಿಂದ ಗುಡ್ಡೆಹೊಸೂರಿಗೆ ಸಂಪರ್ಕ ಕಲ್ಪಿಸುವ ಗ್ರಾಮೀಣ ರಸ್ತೆಗಳು ಕೆಸರುಮಯವಾಗಿದ್ದು ಸಂಚಾರಕ್ಕೆ ತೊಡಕುಂಟಾಗಿದೆ.