ಸೋಮವಾರಪೇಟೆ, ಆ. 9: ವಿದ್ಯುತ್ ಸಮಸ್ಯೆಯಿಂದಾಗಿ ಕುಡಿಯುವ ನೀರಿಗೂ ಸಮಸ್ಯೆಯಾಗಿದ್ದ ಸೋಮವಾರಪೇಟೆ ಪಟ್ಟಣ ವ್ಯಾಪ್ತಿಯ ಸಾರ್ವಜನಿಕರಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ವಿತರಿಸಲಾಯಿತು.
ವಿದ್ಯುತ್ ಸ್ಥಗಿತದಿಂದಾಗಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಿದ್ದರಿಂದ ಪ.ಪಂ.ನ ಟ್ಯಾಂಕರ್‍ನಲ್ಲಿ ನೀರು ಸಂಗ್ರಹಿಸಿ ಸಾರ್ವಜನಿಕರಿಗೆ ವಿತರಿಸಲು ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭ ಪ.ಪಂ. ಸದಸ್ಯ ಬಿ.ಆರ್. ಮಹೇಶ್ ಉಪಸ್ಥಿತರಿದ್ದರು.