ಕೂಡಿಗೆ, ಆ. 9: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡಿಗೆ ಸರ್ಕಲ್ ಹತ್ತಿರದ ಒಂದು ಮನೆಯಲ್ಲಿ ಎರಡು ಕೊರೊನಾ ಸೋಂಕಿತ ವ್ಯಕ್ತಿ ಪತ್ತೆಯಾದ ಹಿನ್ನೆಲೆಯಲ್ಲಿ ಅವರ ಮನೆಯನ್ನು ಸೀಲ್‍ಡೌನ್ ಮಾಡಲಾಗಿದೆ.
ಈ ಸಂದರ್ಭದಲ್ಲಿ ಕೊರೊನಾ ನೋಡಲ್ ಅಧಿಕಾರಿ ವರದರಾಜ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿಲ್ಪಾ, ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಇದ್ದರು.