ಮಡಿಕೇರಿ, ಆ. 10: ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಕ್ವಿಟ್ ಇಂಡಿಯಾ ಚಳುವಳಿಯ 78 ನೇ ವಾರ್ಷಿಕೋತ್ಸವÀ ಆಚರಣೆ ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ನಿರ್ಣಾಯಕ ಮೈಲುಗಲ್ಲಾಗಿರುವ ಕ್ವಿಟ್ ಇಂಡಿಯಾ ಚಳುವಳಿಯ ದಿನಾಚರಣೆಗೆ ಯೋಧರ ನಾಡಾದ ಕೊಡಗಿನಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿರುವುದು ನನ್ನ ಪುಣ್ಯ ಎಂದು ಬಣ್ಣಿಸಿದರು.
ಪಕ್ಷವನ್ನು ವ್ಯವಸ್ಥಿತವಾಗಿ ಸಂಘಟಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ತರುವುದೇ ನನ್ನ ಗುರಿ, ಎಲ್ಲಾ ಕಾರ್ಯಕರ್ತರು ಸಕ್ರಿಯವಾಗಿ ಪಕ್ಷದ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಲು ಕರೆ ನೀಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ಕುಮಾರ್ ಕೆಪಿಸಿಸಿ ಆಯೋಜಿಸಿರುವ ‘ಅಭಯ ಆರೋಗ್ಯ ಹಸ್ತ’ ಕಾರ್ಯಕ್ರಮದ ಮೂಲಕ ಜಿಲ್ಲೆಯ ಪ್ರತಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕರ್ತರು ತಲುಪಲಿದ್ದಾರೆ ಎಂದು ತಿಳಿಸಿದರು.
ಹಿರಿಯ ಮುಖಂಡ ಟಿ.ಪಿ. ರಮೇಶ್ ಕ್ವಿಟ್ ಇಂಡಿಯಾ ಚಳುವಳಿಯ ಮಹತ್ವವನ್ನು ವಿವರಿಸಿದರು. ಮಾಜಿ ಸಂಸದ ಧ್ರುವನಾರಾಯಣ್, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಕೆಪಿಸಿಸಿ ಹಿರಿಯ ಉಪಾಧ್ಯಕ್ಷ ಮಿಟ್ಟು ಚಂಗಪ್ಪ, ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್. ಪೆÇನ್ನಣ್ಣ, ಕೆಪಿಸಿಸಿ ಉಸ್ತುವಾರಿ ಮಂಜುಳಾ ರಾಜ್, ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಡಾ. ಪುಷ್ಪ ಅಮರನಾಥ್, ವೀರಾಜಪೇಟೆ ವೀಕ್ಷಕ ಟಿ.ಎಂ. ಸಯೀದ್ ತೆಕ್ಕಿಲ್, ಕೆಪಿಸಿಸಿ ಸಂಯೋಜಕ ಪ್ರದೀಪ್ ರೈ ಪಾಂಬಾರ್, ಮುಖಂಡರಾದ ಕೆ.ಪಿ. ಚಂದ್ರಕಲಾ, ಹೆಚ್.ಎಸ್. ಚಂದ್ರಮೌಳಿ, ಖಜಾಂಚಿ ಹೆಚ್.ಎಂ. ನಂದಕುಮಾರ್, ತಾರಾ ಅಯ್ಯಮ್ಮ, ನಾಪಂಡ ಮುತ್ತಪ್ಪ, ನಟೇಶ್ ಗೌಡ, ವಿ.ಪಿ. ಶಶಿಧರ್, ಬ್ಲಾಕ್ ಅಧ್ಯಕ್ಷ ಅಪ್ರು ರವೀಂದ್ರ ಹಾಜರಿದ್ದರು. ಸೇವಾದಳದ ಪ್ರೇಮಾ ಕೃಷ್ಣಪ್ಪ ಪ್ರಾರ್ಥಿಸಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರಾ ಮೈನಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.