ಮಡಿಕೇರಿ, ಆ. 9: ನಾಡಿಗಾಗಿ ಹೋರಾಟ ನಡೆಸಿ ಪರಕೀಯರ ಕಪಿಮುಷ್ಟಿಯಿಂದ ದೇಶವನ್ನು ರಕ್ಷಿಸಿ ಪ್ರಾಣವನ್ನೇ ತ್ಯಾಗ ಮಾಡಿದ ಟಿಪ್ಪು ಸುಲ್ತಾನ್, ರಾಣಿ ಅಬ್ಬಕ್ಕ ಹಾಗೂ ಸಂಗೊಳ್ಳಿ ರಾಯಣ್ಣರಂತಹ ಇತಿಹಾಸಕಾರರ ಪಾಠಗಳನ್ನು ಪಠ್ಯ ಪುಸ್ತಕಗಳಿಂದ ಕೈಬಿಟ್ಟಿರುವುದು ಖಂಡನೀಯ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಎಂ.ಎ. ಉಸ್ಮಾನ್ ಹೇಳಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯ ಬಿಜೆಪಿ ಸರ್ಕಾರ ದೇಶ ಕಂಡ ಮಹಾನ್ ಹೋರಾಟಗಾರರಿಗೆ ಅವಮಾನ ಮಾಡುತ್ತಿದೆ. ಟಿಪ್ಪು ಸುಲ್ತಾನ್ ಸಹಿತ ಸ್ವತಂತ್ರ್ಯ ಹೋರಾಟಗಾರರ ಹೆಸರನ್ನು ಮತ್ತೆ ಪಠ್ಯ ಪುಸ್ತಕದಲ್ಲಿ ಸೇರಿಸದಿದ್ದರೆ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದಿಂದ ಪ್ರತಿಭಟನೆ ಯನ್ನು ಹಮ್ಮಿಕೊಳ್ಳುಬೇಕಾಗುತ್ತದೆ ಎಂದಿದ್ದಾರೆ.