ಮಡಿಕೇರಿ, ಆ.10 : ಕೊಡಗು ಜಿಲ್ಲೆಯಲ್ಲಿನ ಮಳೆಹಾನಿ ಪ್ರದೇಶಗಳ ವೀಕ್ಷಣೆಗೆ ಜಾತ್ಯತೀತ ಜನತಾದಳದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಾ.12 ರಂದು ಆಗಮಿಸಲಿದ್ದಾರೆ ಎಂದು ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ ತಿಳಿಸಿದ್ದಾರೆ.

ಬುಧವಾರ ಬೆಳಗ್ಗೆ 10 ಗಂಟೆಗೆ ತಲಕಾವೇರಿ ಪ್ರದೇಶಕ್ಕೆ ಭೇಟಿ ನೀಡಲಿದ್ದು, ನಂತರ ಕರಡಿಗೋಡು, ನೆಲ್ಲಿಹುದಿಕೇರಿ, ನಾಪೋಕ್ಲು, ಕುಶಾಲನಗರ ಸೇರಿದಂತೆ ವಿವಿಧ ಭಾಗಗಳ ಮಳೆಹಾನಿ ಸಂತ್ರಸ್ತರಿಗೆ ಸಾಂತ್ವನ ಹೇಳಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಇಂದು ಸಭೆ

ಕೊಡಗು ಜಿಲ್ಲಾ ಜಾತ್ಯತೀತ ಜನತಾದಳದ ಸಭೆ ತಾ.11 ರಂದು ಮಡಿಕೇರಿಯಲ್ಲಿರುವ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ನಡೆಯಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಅತಿವೃಷ್ಟಿ ಹಾನಿಯ ಪರಿಹಾರೋಪಾಯಗಳ ಬಗ್ಗೆ ಚರ್ಚಿಸಲಾಗುವುದು ಮತ್ತು ಜಿಲ್ಲೆಗೆ ಆಗಮಿಸಲಿರುವ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ರಾಜ್ಯ ನಾಯಕರೊಂದಿಗೆ ಸಮಾಲೋಚನೆ ನಡೆಸುವ ಕುರಿತು ಪೂರ್ವಭಾವಿ ಸಭೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.